Breaking News

ಇಸ್ಲಾಂ ಧರ್ಮದ ಭಾವೈಕ್ಯತೆಗೆ ದಕ್ಕೆಯುಂಟಾಗುವ ವಿಡಿಯೋ ಪೊಸ್ಟ್ ಮಾಡಿದ ಯುವಕನ ಬಂಧನ…!

ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಮಸೀದಿ ಚಿತ್ರದ‌ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ ಮಾಡಿ‌ ವಿವಾದ ಸೃಷ್ಟಿಸಿದ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪೋಟೋ ಎಡಿಟ್ ಮಾಡಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ಜನರು ಜಮಾಯಿಸಿದ್ದಾರೆ.

ಇನ್ನೂ ಹುಬ್ಬಳ್ಳಿ ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಪೊಲೀಸರು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದಾರೆ. ತಲೆ ಕೆಟ್ಟರೆ ಇಲ್ಲು ಧ್ವಜ ಹಾರಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದೂ-ಮುಸ್ಲಿಂ ಭಾವೈಕ್ಯತೆ ದಕ್ಕೆ ಉಂಟು ಮಾಡಿ ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯದ ಜನರು ಆಕ್ರೋಶಗೊಂಡು ಪೊಲೀಸ್ ಠಾಣೆಯ ಮುಂದೆ ಆಕ್ರೋಶ ಹೊರ ಹಾಕುತ್ತಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *