Breaking News

ನ್ಯಾಯಯುತ ಹೋರಾಟ ಮಾಡುವುದನ್ನು ಬಿಟ್ಟು ಹಿಂಸಾಚಾರ ಮಾಡಿದ್ದು ಸರಿಯಲ್ಲ: ಮುತಾಲಿಕ್

ಹುಬ್ಬಳ್ಳಿ :ಇಸ್ಲಾಂ ಧರ್ಮ ಅಂದರೆ ಶಾಂತಿ ಸೌಹಾರ್ದತೆ ಹಾಗೂ ಹೊಂದಾಣಿಕೆಯಿಂದ ಹೋಗುವಂತದ್ದು, ಆದರೆ ನ್ಯಾಯಯುತವಾಗಿ ಹೋರಾಟ ಮಾಡುವ ಬದಲಿಗೆ ಈ ರೀತಿ ಹಿಂಸಾಚಾರ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಿನ್ನೆ ನಡೆದ ಹಿಂಸಾಚಾರವನ್ನು ಖಂಡನೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಹೇಳಿಕೆಯೊಂದನ್ನು ನೀಡಿರುವ ಅವರು, ಮೆಕ್ಕಾ ಮದೀನಾದ ಮಸೀದಿಯ ಮೇಲೆ ಭಗವಾ ಧ್ವಜವನ್ನು ಹಾರಿಸಿರುವ ಒಂದು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಇಷ್ಟೊಂದು ಕ್ರೌರ್ಯವನ್ನು ಮೆರೆಯುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಸ್ಲಾಂ ಧರ್ಮಕ್ಕೆ ತನ್ನದೇ ಆದ ಮಹತ್ವವಿದೆ. ಶಾಂತಿ, ಸೌಹಾರ್ದತೆ, ಹೊಂದಾಣಿಕೆಗೆ ಮತ್ತೊಂದು ಹೆಸರು ಇಸ್ಲಾಂ ಧರ್ಮ ಇಂತಹ ಧರ್ಮದ ನಿಯಮಗಳನ್ನು ಗಾಳಿಗೆ ತೂರಿ ಏಕಾಏಕಿ ಕಲ್ಲು ತೂರಾಟದಂತಹ ಹಿಂಸಾಚಾರ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದನ್ನು ಶ್ರೀರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದರು.

ನೀವು ನ್ಯಾಯಯುತವಾಗಿ ಹೋರಾಟ ಮಾಡಿ ನ್ಯಾಯವನ್ನು ಪಡೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಈ ರೀತಿಯಲ್ಲಿ ಗಲಾಟೆ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಗಲಾಟೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share News

About admin

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *