Breaking News

ಯಾರೇ ಕೃತ್ಯದಲ್ಲಿ ಭಾಗಿಯಾದ್ದರೂ ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು : ಆರಗ ಜ್ಞಾನೇಂದ್ರ

ಹುಬ್ಬಳ್ಳಿ : ಮೊದಲು ದೂರು ಕೊಟ್ಟು ಹೊದವರು, ಮರಳಿ ಗುಂಪು‌ ಗುಂಪಾಗಿ ಬರ್ತಾರೆ. ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ, ವಾಹನಗಳು ಜಖಂಗೊಳಿಸಿದ್ದಾರೆ.
ಸಣ್ಣ ನಿರ್ಲಕ್ಷ್ಯ ಆಗಿದ್ರು ಕೆಜೆ ಹಳ್ಳಿ- ಡಿಜೆ ಹಳ್ಳಿ ಘಟನೆ ಮರುಕಳಿಸುತ್ತಿತ್ತು.ಕೆಜೆ ಹಳ್ಳಿ ಡಿಜೆಹಳ್ಳಿ ಘಟನೆಗೂ ಹುಬ್ಬಳ್ಳಿ ಘಟನೆಗೆ ಸಾಮ್ಯತೆ ಇದೆ ಯಾರೇ ಕೃತ್ಯದಲ್ಲಿ ಭಾಗಿಯಾದ್ದರೂ ಅಂಥವರ ಮೇಲೆ ಕಠಿಣ ಕ್ರಮ.
ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ದೂರು ಕೊಟ್ಟ ಮೇಲೆ ಆರೋಪಿಯನ್ನು ಬಂಧಿಸಿದ್ದರೂ ಗಲಭೆ ಮಾಡಲಾಗಿದೆ. ಇಡೀ ಹುಬ್ಬಳ್ಳಿ ಹೊತ್ತಿ ಉರಿಯುವ ಸಂಭವ ಇತ್ತು.ಇಂಟೆಲಿಜೆನ್ಸಿ ವಿಫಲತೆ ಎಂದು ಹೇಳೋಕೆ ಬರಲ್ಲ.ನಿನ್ನೆ ನಮ್ಮ ಪೊಲೀಸರು ಗಲಭೆಯನ್ನು ನಿಯಂತ್ರಿಸುವಲ್ಲಿ ಸಫಲರಾಗಿದ್ದಾರೆ.
ಕೇವಲ ಒಂದು ಗಂಟೆಯಲ್ಲಿ ಎಲ್ಲವನ್ನೂ ತಹಬದಿಗೆ ತಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುವೆ.
ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂಬ ಅನುಮಾನ ಬರುತ್ತೆ. ಮತೀಯ ಶಕ್ತಿಗಳನ್ನು ಮಟ್ಟಹಾಕದೇ ಬಿಡುವುದಿಲ್ಲ. ಹಳೇ ಹುಬ್ಬಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *