ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಗಳು ಅತ್ಯಂತ ಖಂಡನೀಯ. ಇದಕ್ಕೆ ಹೊಣೆಗಾರರಾಗಿರುವ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮ ಇಲ್ಲವೇ ಪಕ್ಷದವರೇ ಆಗಿರಲಿ ಪೊಲೀಸರು ಅವರನ್ನು ಬಂಧಿಸಿ ಅಲ್ಲಿನ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು.
ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.’ಕೋಮುದ್ವೇಷವನ್ನು ಹುಟ್ಟುಹಾಕಿ, ಹರಡುವ ಮೂಲಕ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕೆಡಿಸುವ ಹುನ್ನಾರವನ್ನು ಸಮಾಜವಿರೋಧಿ ಶಕ್ತಿಗಳು ಸತತವಾಗಿ ನಡೆಸುತ್ತಾ ಬಂದಿರುವುದನ್ನು ಕಾಣಬಹುದು. ಇದು ಕೇವಲ ಆಕಸ್ಮಿಕವಾದ ಘಟನೆಗಳಾಗಿರದೆ ಇದರ ಹಿಂದೆ ಯೋಜಿತ ಕಾರ್ಯಸೂಚಿ ಇದ್ದ ಹಾಗೆ ಕಾಣುತ್ತಿದೆ’ ಎಂದು ಅವರು ಅವರು ಅಭಿಪ್ರಾಯಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

