ಮಹಾರಾಷ್ಟ್ರದ ಕುರ್ಲಾ ವಿಧಾನಸಭಾ ಕ್ಷೇತ್ರದ ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಅವರ ಪತ್ನಿ ರಜನಿ ಮಂಗೇಶ್ ಕುಡಾಲ್ಕರ್ ಅವರ ಮೃತದೇಹ ಭಾನುವಾರ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಜನಿ ರಾತ್ರಿ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ . ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ . ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ . ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

