ಹಾವೇರಿ: ಬಿಜೆಪಿಯಲ್ಲಿರುವ ಅನೇಕ ಸ್ನೇಹಿತರು ನನ್ನನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಹಾಗೇನಾದರೂ ಇದ್ದರೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ನಾನು ಬಿಜೆಪಿ ಸೇರುವ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಬಾರ್ನಲ್ಲಿ ಕುಳಿತುಕೊಂಡರೆ ಅಥವಾ ಏನಾದರೂ ಕಾನೂನು ಬಾಹಿರ ಕೆಲಸ ಮಾಡಿದ್ದರೆ ಸಾಂವಿಧಾನಿಕ ಹುದ್ದೆಯ ನಿಯಮ ಮುರಿದಂತೆ. ಸದನವನ್ನು ಎಷ್ಟು ಕಟ್ಟುನಿಟ್ಟಾಗಿ ನಡೆಸಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ನಿಯಮಗಳನ್ನು ಬಿಟ್ಟು ಏನೂ ಮಾಡಿಲ್ಲ. ಇನ್ನೊಬ್ಬರ ಬಗ್ಗೆ ಟೀಕೆ, ಟಿಪ್ಪಣಿ ಮಾಡುವುದಿಲ್ಲ. ಹೇಳುವವರು ಹೇಳುತ್ತಾರೆ, ಅದಕ್ಕೆ ನನ್ನ ತಕರಾರಿಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

