Breaking News

ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್‌ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ : ಮಾಜಿ ಸಿಎಂ


ಚಾಮರಾಜನಗರ : ಆಧಾರ ರಹಿತವಾಗಿ ನನ್ನ ಸರ್ಕಾರವನ್ನು ಅಂದು ಪ್ರಧಾನಿ ನರೇಂದ್ರ ಮೋದಿ 10% ಕಮಿಷನ್‌ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗ ಈ ಬಿಜೆಪಿ ಸರ್ಕಾರ 40% ಕಮಿಷನ್‌ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘವೇ ಪ್ರಧಾನಿಗೆ 8 ತಿಂಗಳ ಹಿಂದೆ ಪತ್ರ ಬರೆದಿದೆ, ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್‌ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಎಲ್ಲಾ ಏಜೆನ್ಸಿಗಳು ಅವರ ಬಳಿಯೇ ಇದೆಯಲ್ಲಾ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಕಿಡಿಕಾರಿದರು. ಸ್ವಪಕ್ಷದ ಕಾರ್ಯಕರ್ತನಿಂದ ಕಾಮಗಾರಿ ಮಾಡಿಸಿ ಬಳಿಕ 40% ಕಮಿಷನ್‌ಗಾಗಿ ಗುತ್ತಿಗೆದಾರನನ್ನು ಈಶ್ವರಪ್ಪ ಬಲಿ ಪಡೆದಿದ್ದಾರೆ. ಬಡವನ ಹಣಕ್ಕೆ ಕತ್ತರಿ ಹಾಕಿರುವ ಈಶ್ವರಪ್ಪ ಮನುಷ್ಯನಾ, ರಾಕ್ಷಸನಾ, ಆತನನ್ನು ಕೊಲೆಗಡುಕ ಅನ್ನದೇ ಏನನ್ನಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *