ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕುಂದಗೋಳ , ಕಲಘಟಗಿ , ನವಲಗುಂದ ಮತ್ತು ಹುಬ್ಬಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಏಪ್ರೀಲ್ 26 , 27 , 28 ರಂದು ಸಂದರ್ಶನವನ್ನು ಏರ್ಪಡಿಸಲಾಗಿದೆ .
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಏ . 26 ರಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ , 27 ರಂದು ಹುಬ್ಬಳ್ಳಿಯ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ 28 ರಂದು ನವಲಗುಂದ , ಕುಂದಗೋಳ ಮತ್ತು ಕಲಘಟಗಿಯ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಸಂಜೆ 4-30 ಕ್ಕೆ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

