ರಾಜ್ಯಾದ್ಯಂತ ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ವಿದ್ಯಾರ್ಥಿಗಳು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಿ , ವಾಸಸ್ಥಳಕ್ಕೆ ಹಿಂತಿರುಗಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗರ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ . ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ , ಸಂಸ್ಥೆಯ ನಗರ , ಹೊರವಲಯ , ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ವಾ.ಕ.ರ.ಸಾ. ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

