Breaking News

ಚಲನಚಿತ್ರ ವೀಕ್ಷಣೆ ವೇಳೆ ಹಾರಿದ ಗುಂಡು

ಹಾವೇರಿ: ಕೆಜಿಎಫ್ 2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯೋರ್ವನ ಮೇಲೆ ಗುಂಡು ಹಾರಿಸಿದ ಘಟನೆ ಶಿಗ್ಗಾವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ನಡೆದಿದೆ.
ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಎಂಬ ಯುವಕನಿಗೆ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಘಟನೆ ನಡೆದಿದ್ದು, ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿತ್ರಮಂದಿರದಲ್ಲಿ ಗುಂಡು ಹಾರಿರುವುದನ್ನು ಎಸ್ಪಿ ಹನುಮಂತರಾಯ ಖಚಿತ ಪಡಿಸಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *