Breaking News

ಆಟ ಆಡಲು ಹೋದ ಬಾಲಕ ಸ್ಮಶಾನ ಸೇರಿದ


ಮಂಗಳೂರು: ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತ ಬಾಲಕನನ್ನು ಬಜಾಲ್‌ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್‌ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *