Breaking News

ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಹಾಜರಾಗಿತ್ತೀರುವ ಹುಬ್ಬಳ್ಳಿ ಯುವಕ… ಯಾಕೆ ಗೊತ್ತಾ?


ಹುಬ್ಬಳ್ಳಿ: ವಾಟ್ಸ್​ಆಯಪ್​ನಲ್ಲಿ ಅವಹೇಳನಕಾರಿ ಸ್ಟೇಟಸ್​ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.
ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಜೈಲಿನಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್​ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ ಎಂದು ಅಭಿಷೇಕ ಪರ ವಕೀಲ ಸಂಜು ಬಡಸ್ಕರ ತಿಳಿಸಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *