Breaking News

22 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ


ಗುಜರಾತ್‌: ದಾಹೋದ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ದಾಹೋದ್ನ ರೈಲ್ವೆ ಉತ್ಪಾದನಾ ಘಟ ಕದಲ್ಲಿ 9 ಸಾವಿರ ಎಚ್.ಪಿ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಉತ್ಪಾದನಾ ಯೋಜನೆ ಇವುಗಳಲ್ಲಿ ಸೇರಿವೆ. 1926 ರಲ್ಲಿ ಸ್ಥಾಪನೆಯಾಗಿರುವ ದಾಹೋದ್ ರೈಲ್ವೆ ಕಾರ್ಯಾಗಾರವನ್ನು ಸ್ಟೀಮ್ ಲೋಕೊಮೋಟಿವ್ಸ್ನಿಂದ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ಗೆ ಪರಿವರ್ತಿಸುವ ಉತ್ಪಾದನಾ ಯೋಜನೆಯು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣವಾಗಲಿದೆ. ಈ ಯೋಜನೆಯು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ನೀಡಲಿದೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *