Breaking News

ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಯುದ್ದ: ಸಿದ್ದರಾಮಯ್ಯ ಹೆಸರು ಘೋಷಿಸಿ ಎಂದು ತಂಡ ರಚನೆ

ಬೆಂಗಳೂರು: “ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ’ ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್‌ನ ತಂಡವೊಂದು ಮುಂದಿಟ್ಟಿದೆ. ರಾಜ್ಯ ಕಾಂಗ್ರೆಸ್‌ನ ನೇತೃತ್ವ ಯಾರಿಗೆ ಎಂಬ ಬಗ್ಗೆ ಆಂತರಿಕ ಗೊಂದಲ ಮುಂದುವರಿದಿರುವ ನಡುವೆಯೇ ಈ ಹೊಸ ಬೆಳವಣಿಗೆ ನಡೆದಿದೆ.

ಪಂಜಾಬ್‌ನಲ್ಲಿ ನಡೆದಿದ್ದ ಚುನಾವಣೆ ವೇಳೆ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿತ್ತು. ಅದೇ ರೀತಿ 2023ರ ವಿಧಾನಸಭೆ ಚುನಾ ವಣೆಯಲ್ಲಿ ರಾಜ್ಯದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ರಾಹುಲ್‌ ಗಾಂಧಿಯವರ ಗಮನ ಸೆಳೆಯಲು ಈ ತಂಡ ಮುಂದಾಗಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *