ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಇದೇ ಎ. 23ರಿಂದ ಆರಂಭಗೊಳ್ಳಲಿದೆ. ಮೇ 3ರೊಳಗೆ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಗುರುವಾರ ಮತ್ತು ಶುಕ್ರವಾರ (ಎ.21, 22) ಮೌಲ್ಯಮಾಪಕರಿಗೆ ತರಬೇತಿ ನೀಡಲಾಗುತ್ತದೆ. 23ರಿಂದ ಅಧಿಕೃತವಾಗಿ ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ರಾಜ್ಯದ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

