ಬೆಂಗಳೂರು: ಕಲ್ಯಾಣ ಕರ್ನಾಟಕದ ಕೆಲಭಾಗಗಳಲ್ಲಿ ಶುಕ್ರವಾರ ಬೇಸಿಗೆ ಮಳೆಯಾಗಿದ್ದು ಬಾಲಕ ಸೇರಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಂತ್ರಪಳ್ಳಿ ಗ್ರಾಮದ ಬಾಲಕ ನಾಗರಾಜ(11) ಹೊಲಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆ ರೇವನೂರ ಗ್ರಾಮದಲ್ಲಿರುವ ತನ್ನ ಜಮೀನಿನಲ್ಲಿ ಶುಕ್ರವಾರ ಸಂಜೆ ಶೇಂಗಾ ಬಿಡಿಸುತ್ತಿದ್ದ ರೈತ ಮಹಾದೇವಪ್ಪ(44) ಸಿಡಿಲಿಗೆ ಬಲಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

