Breaking News

ರಾಜ್ಯ ಹೈಕೋರ್ಟ್‌ಗೆ ಏ.24ರಿಂದ ಬೇಸಿಗೆ ರಜೆ


ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಏ.24ರಿಂದ ಮೇ 21ರವರೆಗೆ ಬೇಸಿಗೆ ರಜೆ ಇರಲಿದೆ.

ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.
ಏಪ್ರಿಲ್‌ 26, 28, ಮೇ 5, 10, 12, 17 ಮತ್ತು 19 ರಂದು ರಜಾ ಕಾಲದ ಪೀಠಗಳು ಕಾರ್ಯನಿರ್ವಹಿಸಲಿವೆ.

ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ (ನ್ಯಾಯಾಂಗ) ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *