ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯ ಸಂಚಲನ ಸೃಷ್ಟಿಯಾಗುತ್ತಲೇ ಇದೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯು ಮುನ್ನೆಲೆಗೆ ಬಂದಿದ್ದು, ಈಗ ಸಿಎಂ ರೇಸ್ ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ದಿಢೀರ್ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ತಿಂಡಿ ತಿನ್ನಲು ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಆಗಮಿಸಿದ್ದು, ಒಂದೆಡೆಯಾದರೇ ಈ ಬಾರಿ ಶಾಸಕ ಬೆಲ್ಲದ ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎಂಬುವಂತ ಮಾತುಗಳು ಬಿಜೆಪಿ ಆಪ್ತವಲಯಲ್ಲಿ ಕೇಳಿ ಬರುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

