ಬೆಂಗಳೂರು : ಭಾರತೀಯ ಚಿತ್ರರಂಗದಲ್ಲಿ ಡಾ.ರಾಜ್ ಕುಮಾರ್ ರವರು ಜನ್ಮದಿನವನ್ನು ಪ್ರತಿವರ್ಷ ಸರ್ಕಾರದಿಂದಲೇ ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅದ್ಭುತ ನಟನಾ ಕೌಶಲ್ಯದಿಂದ ತನ್ನದೆ ಆದ ಛಾಪನ್ನು ಮೂಡಿಸಿದ ಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

