Breaking News

ವರುಣನ ಆರ್ಭಟಕ್ಕೆ ಎಮ್ಮೆ, ಮಹಿಳೆ ಬಲಿ


ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದ ಕೃಷಿಕ‌ ಮಹಿಳೆ ಸಿಡಿಲು ಬಡೆದು ಮೃತಪಟ್ಟಿದ್ದಾರೆ. ವೆಂಕಟಾಪುರ ಗ್ರಾಮದ ಮಲ್ಲಮ್ಮ ವಟವಟಿ(38) ಮೃತ ಮಹಿಳೆ.

ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಮಹಿಳೆ ಮೃತರಾಗಿದ್ದಾರೆ. ಸಿಡಿಲಿಗೆ ಹೊಟ್ಟೆಯ ಭಾಗ ಛಿದ್ರವಾಗಿದೆ. ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಳೆಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಎರಡಕ್ಕೇರಿದೆ. ಕಳೆದ ವಾರ ಮರ ಬಿದ್ದು ನಗರದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದರು. ಇನ್ನು ಸವದತ್ತಿ ತಾಲೂಕಿನ ಹಿರೇಬದೂನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಎಮ್ಮೆಗಳು ಮೃತಪಟ್ಟಿವೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *