Breaking News

ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ..‌. ಯಾಕೆ ಗೊತ್ತಾ?


ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದ್ದರು. ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಇಂದು ಸಚಿವರ ವಿರುದ್ಧ ಧರಣಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *