ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 85 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,686ಕ್ಕೆ ಏರಿದ್ದು, 70 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 7,171 ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರು ನಗರದಲ್ಲಿ 82 ಪ್ರಕರಣ, ವಿಜಯಪುರದಲ್ಲಿ 1 ಮತ್ತು ತುಮಕೂರಿನಲ್ಲಿ 2 ಪ್ರಕರಣ ದಾಖಲಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

