Breaking News

ಮೇ ೧೦ ರಂದು ಬೆಂಗಳೂರು ಚಲೋ


ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾಟಿಕ್ ಹಾಗೂ ಖಟಿಕ್ ಸಮಾಜದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಕಾಟಿಕ್ ಹಾಗೂ ಖಟಿಕ್ ಜಾತಿಯನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮೇ ೧೦ ರಂದು ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನದ ಬೃಹತ್ ಸಾಂಕೇತಿಕ ಧರಣಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಆರ್. ಕೆ. ಸಿದ್ದರಾಮಣ್ಣ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟಿಕ್ ಹಾಗೂ ಖಟಿಕ್ ಜಾತಿಯು ಸಾಮಾಜಿಲ ನ್ಯಾಯದಿಂದ ವಂಚಿತವಾಗಿದೆ. ಈ ಜಾತಿಯನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸುವಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೇ ಈ ವಿಷಯಕ್ಕೆ ಸಂಬಂಧಿಸಿದಂತೆ ಇನ್ನೂ ಪರಿಶೀಲನೆಯಲ್ಲಿದ್ದು, ಈವರೆಗೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಎಂದರು.

ನಮ್ಮ ಬೇಡಿಕೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕಾಟಿಕ್ ಹಾಗೂ ಖಟಿಕ್ ಜಾತಿಯ ಬೇಡಿಕೆಯನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲು ಹೋರಾಟ ಅನಿವಾರ್ಯವಾಗಿದೆ. ಈ ಹೋರಾಟವನ್ನು ಕೈಗೊಳ್ಳಲು ರಾಜ್ಯದಲ್ಲಿ ಸಂಚಲನಾ ಸಮಿತಿ ರಚನೆಗೊಂಡಿದ್ದು, ಮೇ. ೧೦ ರಂದು ಬೆಂಗಳೂರು ಚಲೋ ಬೃಹತ್ ಧರಣಿ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ ಗಂಡಗಾಳೇಕರ ಹಾಗೂ ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *