ಬೆಂಗಳೂರು: ಕೋವಿಡ್ 4ನೇ ಅಲೆ ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಬೂಸ್ಟರ್ ಡೋಸ್ ಅಭಾವ ಎದುರಾಗಿದೆ.
ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಬಗ್ಗೆ ಹೆಚ್ಚಿನ ಜಾಗೃತೆ ತೆಗೆದುಕೊಳ್ಳಲು ತಜ್ಞರು ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

