Breaking News

ಪೊಲೀಸರಿಂದ ದಿಂಗಾಲೇಶ್ವರ ಶ್ರೀ ಹೋರಾಟವನ್ನು ತಡೆದಿಲ್ಲ : ಸಿ.ಸಿ.ಪಾಟೀಲ

ನರಗುಂದ: ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಸ್ವತಂತ್ರರಾಗಿದ್ದಾರೆ. ಆದ್ದರಿಂದ ದಿಂಗಾಲೇಶ್ವರ ಶ್ರೀಗಳನ್ನು ನರಗುಂದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ತಡೆದಿರಬಹುದು. ಆದರೆ ನಾನು ಯಾವುದೇ ರೀತಿಯ ಪ್ರಭಾವ ಬಳಸಿ ಪೊಲೀಸರಿಂದ ದಿಂಗಾಲೇಶ್ವರ ಶ್ರೀ ಹೋರಾಟವನ್ನು ತಡೆದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ಗದಗ ತೋಂಟದಾರ್ಯ ಮಠಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಂ.ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥವಾಗಿ ಪ್ರತಿವರ್ಷ ಭಾವೈಕ್ಯ ದಿನಾಚರಣೆ ಆಚರಿಸುವುದಾಗಿ ಹೇಳಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ದಿಂಗಾಲೇಶ್ವರ ಶ್ರೀ ಪರ್ಸೆಂಟೆಜ್ ಸರ್ಕಾರ ಎಂದು ಆರೋಪ ಮಾಡಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *