ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಫಿಲ್ ಮುಲ್ಲಾ ಎಂಬಾತನನ್ನು ಇಂದು ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಏಪ್ರಿಲ್ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ಇಂದು ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬೆನ್ನಲ್ಲೇ ನ್ಯಾಯಾಲಯ ಏಪ್ರಿಲ್ 30ರ ವರೆಗೆ ನ್ಯಾಯಾಂಗ ಬಂಧನ ಆದೇಶ ನೀಡಿದೆ.
ಇನ್ನೂ ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶಿರ್ ಹೊನ್ನಾಳ ಹಾಗೂ ಆರಿಫ್ ನಾಗರಾಳ ಎಂಬುವರನ್ನು 5 ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ನೀಡಿ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

