Breaking News

ಹಿಂದಿ ಹೇರಿಕೆಯ ತಂತ್ರ ಸರಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಸಿನಿಮಾಗೆ ಯಾವುದೇ ಭಾಷೆ ಇಲ್ಲ. ಭಾಷೆ ಇಲ್ಲದ ಭಾವನಾತ್ಮಕ ಚಿತ್ರಣವೇ ಈ ಸಿನಿಮಾ. ಇಲ್ಲಿ ಯಾವುದೇ ರೀತಿಯಲ್ಲಿ ವಿವಾದಾತ್ಮಕ ವಿಷಯಗಳನ್ನು ಹುಟ್ಟು ಹಾಕುವುದು ಸರಿಯಲ್ಲ. ಪ್ರತಿಯೊಂದು ಪ್ರಾಂತ್ಯದಲ್ಲಿಯೂ ಭಾಷೆಗಳು ತಮ್ಮದೇ ಆದ ಮಹತ್ವವನ್ನು ಪಡೆದುಕೊಂಡಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಜಲಧಾರೆ ಅಭಿಯಾನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ವೇಳೆಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಭಾಷೆಯನ್ನು ಮತ್ತೊಂದು ಬಾಷೆಯ ಮೇಲೆ ಹೇರಿಕೆ ಮಾಡುವುದು ಸರಿಯಲ್ಲ ಎಂದರು.

ಸಿನೆಮಾಗಳಿಗೆ ಯಾವುದೇ ಭಾಷೆಗಳಿಲ್ಲ, ನಟರು ಈ ವಿಚಾರಕ್ಕೆ ಹೋಗಬಾರದು. ಸಿನೆಮಾ ಅನ್ನೊದು ಭಾವನಾತ್ಮಕ ಸಂಬಂಧ ಇರುವ ಕ್ಷೇತ್ರ. ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ಅದರದೆ ಆದ ಸ್ಥಾನ ಮಾನಗಳು ಇರುತ್ತವೇ. ಹಿಂದಿ ಹೆರಿಕೆ ಒತ್ತಡ ತಂತ್ರ ಸರಿಯಲ್ಲ ಎಂದು ಅವರು ಹೇಳಿದರು.

ಪಿಎಸ್‌ಐ ಹಗರಣದ ರೂವಾರಿ ದಿವ್ಯಾ ಹಾಗರಗಿ ಬಂಧಿಸಿದ ವಿಚಾರ, ಇದಕ್ಕೆ ಸರ್ಕಾರವೇ ಉತ್ತರ ನೀಡಬೇಕು. ಅವಳು ರಾಜಕೀಯ ಕೃಪಾ ಕಟಾಕ್ಷದಲ್ಲಿ ಇದ್ದಾಳೋ ಗೊತ್ತಿಲ್ಲ. ಪೊಲೀಸರು ಚಳ್ಳೆಹಣ್ಣು ತಿನ್ನಿಸಿ ಯಾರ ಕಣ್ಣಿಗೂ ಸಿಗದೆ ಇರೋದು ಅವರೆಷ್ಟು ಶಕ್ತಿಶಾಲಿ ಅನ್ನೋದು ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *