Breaking News

ಅಜಯ್‌ ದೇವಗನ್‌, ಸುದೀಪ ಟ್ವೀಟ್‌ ಸಮರ ರಾಜಕಾರಣದಲ್ಲಿ ತಿರುವು

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಹೌದೇ ಅಲ್ಲವೇ ಎಂಬ ಬಗ್ಗೆ ಕನ್ನಡದ ನಟ ಸುದೀಪ್ ಮತ್ತು ಹಿಂದಿ ನಟ ಅಜಯ್‌ ದೇವಗನ್‌ ಮಧ್ಯೆ ನಡೆದ ಟ್ವೀಟ್‌ ಸಮರ ಈಗ ರಾಜಕೀಕರಣಗೊಂಡಿದೆ. ಈ ವಿಚಾರವಾಗಿ ಬಿಜೆಪಿಯಲ್ಲೂ ಭಿನ್ನ ಅಭಿಪ್ರಾಯಗಳೂ ವ್ಯಕ್ತವಾಗಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕನ್ನಡವೇ ಸಾರ್ವಭೌಮ ಭಾಷೆ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು’ ಎನ್ನುವ ಮುಖೇನ ಸುದೀಪ್‌ ಅವರನ್ನು ಬೆಂಬಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ‘ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ, ಹಿಂದಿ‌ ಹೇರಿಕೆ ಕೂಡಾ ಮಾಡುವುದಿಲ್ಲ’ ಎಂದಿದ್ದಾರೆ. ಬಿಜೆಪಿಯ ಹಲವು ನಾಯಕರು ಸಂಪರ್ಕ ಭಾಷೆಯಾಗಿ ಹಿಂದಿ ಬಳಕೆಯಾಗುವ ಅಗತ್ಯವಿದೆ ಎಂದಿದ್ದರೂ, ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ಎಂದಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *