Breaking News

ಲಾರಿಗಳ ಮಧ್ಯೆ ಡಿಕ್ಕಿ : ಇಬ್ಬರು ಸಾವು


ಧಾರವಾಡ : ವಿಆರ್ , ಎಲ್ ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಲಾರಿಯ ನಡುವೆ ಇಂದು ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು , ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ .

ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ , ಇಬ್ಬರು ಚಾಲಕರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ ಎರಡು ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು , ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ.ಮೃತಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.ಘಟನೆಯಿಂದ ಧಾರವಾಡ ಸವದತ್ತಿ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ . ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ .

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *