ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು ಸಮರಕ್ಕೆ ಮುಂದಾಗಲಿದ್ದು, ಇದಲ್ಲದೇ ಸರ್ಕಾರದ ಕ್ರಮ ಖಂಡಿಸಿ ಶನಿವಾರದಿಂದ ಉಪವಾಸ ಸತ್ಯಾಗ್ರಹ ನಡೆಸಲು ಪ್ರಾಮಾಣಿಕ ವಿದ್ಯಾರ್ಥಿಗಳು ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

