ಬೆಂಗಳೂರು : ರಾಜ್ಯದ ಪ್ರತಿ ಗ್ರಾಮಪಂಚಾಯಿತಿ ಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ,ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ.
ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ,ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

