Breaking News

ಪಿಎಸ್‌ಐ ನೇಮಕಾತಿ ಅಕ್ರಮ : 12 ಅಭ್ಯರ್ಥಿಗಳ ಬಂಧನ


ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಎಸ್​ಪಿ ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಹಾಜರುಪಡಿಸಿ, 10 ದಿನ ವಶಕ್ಕೆ ಪಡೆದರು.

ಬಂಧಿತರು 2020-21ನೇ ಸಾಲಿನಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ತನಿಖೆಯ ವೇಳೆ ಅಭ್ಯರ್ಥಿಗಳ ಒಎಂಆರ್​​ ಶೀಟ್‌ನ ಕಾರ್ಬನ್ ಪ್ರತಿ ಪಡೆಯಲಾಗಿತ್ತು. ಈ ಪೈಕಿ 22 ಅಭ್ಯರ್ಥಿಗಳ ಮೂಲ ಒಎಂಆರ್​​ ಪ್ರತಿ ಹಾಗೂ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಹೈಗ್ರೌಂಡ್ಸ್ ಠಾಣೆಗೆ ಸಿಐಡಿ ಡಿಎಸ್​ಪಿ ದೂರು ಸಲ್ಲಿಸಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *