ಬೆಂಗಳೂರು : ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಹೊಸ ಮಾದರಿಯ ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ಮುಂದೆ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ.
2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ ಶಿಕ್ಷಣ ನೀತಿ (NEP) ಭಾಗವಾಗಿ ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದುವರೆಗೆ 30 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಮತ್ತು 70 ಅಂಕಗಳಿಗೆ ಥಿಯರಿ ಪರೀಕ್ಷೆ ನಡೆಸಲಾಗುತ್ತಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

