ರಾಮನಗರ : ರಸ್ತೆ ಅಪಘಾತದಲ್ಲಿ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ತಿಮ್ಮೇಗೌಡನ ದೊಡ್ಡಿ ಗ್ರಾಮದ ಚಂದ್ರಶೇಕರ್ ಮೃತಪಟ್ಟಿದ್ದಾರೆ . ಇವರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು . ಭಾನುವಾರ ಸಂಜೆ ಬೈಕ್ ನಲ್ಲಿ ರಾಮನಗರಕ್ಕೆ ವಾಪಸಾಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ . ಇನ್ನು ಎರಡು ದಿನಗಳಲ್ಲಿ ಅವರ ವಿವಾಹ ವಾರ್ಷಿಕೋತ್ಸವ ಕೂಡ ಇತ್ತು . ಆದರೆ ವಿಧಿಯಾಟ ಬೇರೆಯೇ ಆಗಿತ್ತು.ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

