ಬೆಂಗಳೂರು : ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ -2021ಯುನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ವಿಶೇಷ ವಿಮಾನದ ಮೂಲಕ ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ರಾಜ್ಯ ಸಚಿವರುಗಳಾದ ಅರಗ ಜ್ಞಾನೇಂದ್ರ, ಗೋವಿಂದ ಎಮ್ ಕಾರಜೋಳ, ನಾರಾಯಣ ಗೌಡ, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

