Breaking News

ಎರಡು ವರ್ಷಗಳ ನಂತರ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ರಂಜನಾ ಸಂಭ್ರಮಾಚರಣೆ

ಹುಬ್ಬಳ್ಳಿ : ನಗರದಯಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಗಳಿಂದ ರಂಜಾನ್ ಆಚರಿಸಲಾಯಿತು. ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ಸ್ಥಗಿತಗೊಂಡಿತ್ತು. ಈ ಬಾರಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಹಿನ್ನೆಲೆಯಲ್ಲಿ, ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ವಿವಾದದ ಕೇಂದ್ರ ಬಿಂದುವಾಗಿದ್ದ ಚೆನ್ನಮ್ಮ ವೃತ್ತದಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಮಾಜಿ ಸಚಿವ ಎ ಎಂ ಹಿಡಸಗೇರಿ, ಹೊಸಮಠದ ಚಂದ್ರಶೇಖರ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರಿಂದ ಮುಸ್ಲಿಂ ಬಾಂಧವರಿಗೆ ಶುಭಾಶಯ ವಿನಿಮಯ ಮಾಡಿದರು.
ಶಾಸಕ ಪ್ರಸಾದ್ ಅಬ್ಬಯ್ಯ,ಪ್ರಾರ್ಥನೆ ಸಲ್ಲಿಸಿ ನಂತರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡಿದ್ದರು. ರಂಜಾನ್ ಹಾಗೂ ಬಸವ ಜಯಂತಿ ಹಿನ್ನೆಲೆ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *