Breaking News

ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೀರೆಸೂರ ಗ್ರಾಮದಲ್ಲಿ ನಡೆದಿದೆ.

ಭೀಮಪ್ಪ ರಂಗಪ್ಪ ಯಂಡಿಗೇರಿ (30) ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಕುರಿ ಕಾಯುತಿದ್ದ ಎನ್ನಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *