ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಕಾಲಿಕವಾಗಿ ಸುರಿದ ಧಾರಾಕಾರ ಮಳೆಯು ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿದ್ದು ,
ಮಳೆಗೆ ಮರ ಬಿದ್ದಿರುವ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮನೆಯ ಹತ್ತಿರದ ದೇಸಾಯಿ ಕ್ರಾಸ್ ನಲ್ಲಿ ನಡೆದಿದೆ .
ಬಿರುಗಾಳಿ ಸಹಿತ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು , ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿರುವ ಪರಿಣಾಮ ಆಟೋದಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ . ರೂಬಿ ಮೋರಿಸ್ ಎಂಬಾತನೇ ಮೃತ ದುರ್ದೈವಿಯಾಗಿದ್ದು , ಹುಬ್ಬಳ್ಳಿ ದೇಸಾಯಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಇಂತಹದೊಂದು ದೊಡ್ಡ ಅಪಘಡ ಸಂಭವಿಸಿದೆ .
ಈಗಾಗಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿದ್ದು , ಮತ್ತೋರ್ವ ಪ್ರಯಾಣಿಕರಿಗೆ ಗಾಯಗಳಾಗಿವೆ . ಇನ್ನೂ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು , ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ . ಸ್ಥಳಕ್ಕೆ ತಹಸೀಲ್ದಾರ ಶಶಿಧರ್ ಮಾಡ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

