Breaking News

ಪಿಎಸ್‌ಐ ನೇಮಕಾತಿ ಅಕ್ರಮ : ಡಿವೈಎಸ್‌ಪಿ, ಎಸ್ಪಿ ಅಮಾನತು

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಆರೋಪದ ಮೇಲೆ ಕಲಬುರಗಿ ಬೆರಳಚ್ಚು ವಿಭಾಗದ ಡಿವೈಎಸ್‌ಪಿ ಆರ್‌.ಆರ್‌. ಹೊಸಮನಿ ಮತ್ತು ಮಹಿಳಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಿಲೀಪ್‌ ಸಾಗರ್‌ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.

ಪರೀಕ್ಷಾ ಅಕ್ರಮ ನಡೆದಿರುವ ಕಲಬುರಗಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಆರ್‌.ಆರ್‌. ಹೊಸಮನಿ ಮತ್ತು ಮೇಲ್ವಿಚಾರಕರಾಗಿ ದಿಲೀಪ್‌ ಸಾಗರ್‌ ಕಾರ್ಯನಿರ್ವಹಿಸಿದ್ದರು. ಈ ಇಬ್ಬರೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಿರುವ ಕಾರಣದಿಂದ ಅಮಾನತು ಮಾಡಲಾಗಿದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಡಿವೈಎಸ್‌ಪಿ ಹುಲ್ಲೂರು ಅವರನ್ನು ನೇಮಿಸಲಾಗಿತ್ತು. ಸಂಬಂಧಿಕರೊಬ್ಬರು ನಿಧನರಾಗಿದ್ದಾರೆ ಎಂಬ ಕಾರಣ ನೀಡಿ ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲೇ ಹುಲ್ಲೂರು ಕರ್ತವ್ಯದಿಂದ ಬಿಡುಗಡೆಯಾಗಿದ್ದರು. ಬಳಿಕ ಹೊಸಮನಿ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಇಬ್ಬರೂ ಪೂರ್ವಯೋಜಿತವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದರು. ಹುಲ್ಲೂರು ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ ಎಂದು ಮೂಲಗಳು ಹೇಳಿವೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *