Breaking News

ರಸ್ತೆ ಅಪಘಾತದಲ್ಲಿ ಯೋಧ ಸಾವು


ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಸರಕೊಪ್ಪಲು ಗ್ರಾಮದ ಯೋಧ ಸಂಜಯ್ (22) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.

ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್, ರಜೆಯ ಮೇಲೆ ತವರಿಗೆ ಬಂದಿದ್ದರು.ಮೂರು ದಿನಗಳ ಹಿಂದೆ ಹಾಸನದ ಎಂ.ಜಿ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೇಶ ಸೇವೆ ಮಾಡಬೇಕು ಎಂಬ ಮಹದಾಸೆಯಿಂದ ಭಾರತೀಯ ಸೇನೆ ಸೇರಿದ್ದ ಸಂಜಯ್, ಇತ್ತೀಚೆಗಷ್ಟೇ ಬಡ್ತಿ ಪಡೆದಿದ್ದರು. ಯೋಧನ ಅಗಲಿಕೆಗೆ ಅನೇಕರು ಕಂಬನಿ ಮಿಡಿದಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *