ಧಾರವಾಡ : ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ .
ಮೇ 5 ರಂದು ಜಿಲ್ಲಾಧಿಕಾರಿಯವರಿಂದ ಅಧಿಸೂಚನೆ ಪ್ರಕಟ , ಮೇ 10 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.ಮೇ 11 ರಂದು ನಾಮಪತ್ರಗಳ ಪರಿಶೀಲನೆ , ಮೇ 13 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ . ಮೇ 20 ಶುಕ್ರವಾರದಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುವುದು . ಮೇ . 22 ಭಾನುವಾರದಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

