ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವವನ್ನು ಮೇ.5 ರಿಂದ ಮೇ.13 ರವರೆಗೆ ನಡೆಯಲಿದೆ ಎಂದು ಗ್ರಾಮದ ಹಿರಿಯರಾದ ಮೂಗಪ್ಪ ಬೆಟದೂರು ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇಂದು ಸಂಜೆ 6 ಕ್ಕೆ ಪ್ರವಚನ ಪ್ರಾರಂಭೋತ್ಸವ ಮತ್ತು ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಚಿವ ಶಂಕರಪಾಟೀಲ ಮುನೇನಕೊಪ್ಪ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಮಾಜಿ ಶಾಸಕ ಎನ್.ಹೆಚ್.ಕೊನರೆಡ್ಡಿ ಆಗಮಿಸಲಿದ್ದು, ದಿವ್ಯ ಸಾನಿಧ್ಯವನ್ನು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.
ಮೇ.6 ರಿಂದ ಪ್ರತಿದಿನ ಸಂಜೆ 6 ಕ್ಕೆ ಧರ್ಮಸಭೆಯ ಕಾರ್ಯಕ್ರಮ ನಡೆಯಲಿದೆ. ವಿವಿಧ ಮಠದ ಶ್ರೀಗಳು ಪ್ರವಚನ ನೀಡಲಿದ್ದು, ಮೇ.13 ರಂದು ಪ್ರವಚನ ಮಂಗಲೋತ್ಸವ ಸಮಾರೋಪ ಸಮಾರಂಭ ನಡೆಯಲಿದೆ. ಮೂರುಸಾವಿರಮಠದ ಗುರುಸಿದ್ದರಾಜಯೋಗಿಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅತಿಥಿಗಳಾಗಿ ಶಾಸಕ ಪ್ರಸಾದ್ ಅಬ್ಬಯ್ಯ, ಅಮೃತ ದೇಸಾಯಿ, ಸಂತೋಷ ಲಾಡ್, ಕೆ.ಎನ್.ಗಡ್ಡಿ, ನಾಗರಾಜ್ ಛಬ್ಬಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಉಪಸ್ಥಿತರಿದ್ದರು ಎಂದರು.
ಪತ್ರಿಕಾಗೋಷ್ಠಿ ಸುನಿಲ ಜೀನಗೂಡು, ಸಂಜು ಶಾನವಾಡ, ಹನುಮಪ್ಪಗೌಡ ಬೆಂಗೇರಿ, ರಾಜು ದ್ಯಾಮವಗೌಡ್ರ, ಮಂಜು ಬಿಂಗಿ, ತುಳುಜಪ್ಪ ಹುಲಕೋಟಿ, ಮಹದೇವ ಹಾಯಗಾರ ಸೇರಿದಂತೆ ಮುಂತಾದವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

