ಬಂಟ್ವಾಳ : ಮೇ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.
16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 9 ತಿಂಗಳನ್ನು ಮೂರು ಭಾಗಗಳನ್ನಾಗಿ ಮಾಡಿ ಕಲಿಕೆ ಮಾಡಲಾಗುವುದು. ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರಕ್ಕೊಂದು ದಿನ ನೈತಿಕ ಶಿಕ್ಷಣ ಜಾರಿಗೊಳಿಸುವ ಚಿಂತನೆ ಇದೆ. ಮಕ್ಕಳನ ವಿಕಸನಕ್ಕಾಗಿ ಏಕರೂಪ ಭಾರತೀಯ ಶಿಕ್ಷಣ ನೀತಿಯನ್ನು 1 ಮತ್ತು 2 ನೇ ತರಗತಿಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

