Breaking News

ಕೆಎಸ್‌ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ : 29 ಜನರಿಗೆ ಗಾಯ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್‌ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಸಮೀಪ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಆಗಿದೆ. 4 ಅಡಿ ತಡೆಗೋಡೆಗೆ ಗುದ್ದಿ ನಂತರ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದ್ದು, ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಾತ್ರಿ 1.30 ರ ಸುಮಾರಿಗೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *