Breaking News

ಯೋಧನಿಂದ ಹಾಡಹಗಲೇ ಗುಂಡು ಹಾರಿಸಿ ಮಹಿಳೆ ಬರ್ಬರ ಕೊಲೆ


ಬಾಗಲಕೋಟೆ: ಹಾಡಹಗಲೇ ಗುಂಡು ಹಾರಿಸಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ.

ದ್ಯಾಮವ್ವ ಪೂಜಾರಿ (45) ಹತ್ಯೆಯಾದ ಮಹಿಳೆ. ಕಾರಿನಲ್ಲಿ ಬಂದು ಗುಂಡು ಹಾರಿಸಿ ಪರಾರಿ ಆಗಿದ್ದ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದ್ಯಾಮವ್ವನನ್ನು ಆಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಕೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಎಸ್‌ಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೂಟೌಟ್ ಮಾಡಿದವನು ಯೋಧನೆಂದು ಮೃತಳ ಸಂಬಂಧಿಕರು ಆರೋಪ ಮಾಡಿದ್ದಾರೆ. ಯೋಧ ಮುತ್ತು ಖಾನಾಪುರ ಶೂಟೌಟ್ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ದ್ಯಾಮವ್ವಳ ಚಿಕ್ಕಪ್ಪನ ಮಗ ಯೋಧ ಮುತ್ತು ಖಾನಾಪುರನೇ ಈ ಕೃತ್ಯ ಮಾಡಿದ್ದಾನೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಶೂಟೌಟ್ ಪ್ರಕರಣದಲ್ಲಿ ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿಕೆ ನೀಡಿದ್ದು, ಶೂಟೌಟ್ ಮಾಡಿದ್ದು,ಯೋಧ ಮುತ್ತು ಖಾನಾಪುರ. ಆತನಿಗೆ ಸಾತ್ ನೀಡಿದ್ದು ಕೂಡ ಸಹೋದ್ಯೋಗಿ ಯೋಧ. ಮುತ್ತು ಖಾನಾಪುರಗೆ ಇನ್ನೋರ್ವ ಯೋಧ ಶುಕ್ಲಾ ಎಂಬುವವನು ಸಾಥ್ ನೀಡಿದ್ದ. ಮನೆ ಜಾಗದ ವಿಚಾರಕ್ಕಾಗಿ ಕೊಲೆ ನಡೆದಿದೆ. ಇಬ್ಬರೂ ಹೈದರಾಬಾದ್​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹೈದರಾಬಾದ್ ನಿಂದ ಕಾರಿನಲ್ಲಿ ಬಂದು ಶೂಟೌಟ್ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *