ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಮಹಾನುಭಾವನಿಗೆ ಎರಡು ಬಾರಿ ಟಿಕೆಟ್ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೆಸರು ಪ್ರಸ್ತಾಪಿಸದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿಜಿಯೊಬ್ಬರು ಏನೋ ತಪ್ಪು ಮಾಡಿಕೊಂಡಿದ್ದಾನೆ. ಒಂದು ಬಾರಿ ಟಿಕೆಟ್ ಕೊಡಿ ಎಂದಿದ್ದರು. ಅವರ ಸಲಹೆ ಮೇರೆಗೆ ಟಿಕೆಟ್ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ ರು. ಈ ಕ್ಷೇತ್ರಕ್ಕೆ ಅನುದಾನ ನೀಡಿದೆ. ಕೊನೆಗೆ ನನಗೆ ಟೋಪಿ ಹಾಕಿ ಹೋದ. ಅಬಕಾರಿ ಇಲಾಖೆಯಲ್ಲಿ ಗುರಿ ಹಾಕಿಕೊಂಡು ಲೂಟಿ ಮಾಡಲಾಗುತ್ತಿದೆ. ವೈನ್ ಸ್ಟೋರ್‌ಗಳಿಂದ ವಸೂಲಿ ಮಾಡಲಾಗುತ್ತಿದೆ. ಪಾಪದ ಹಣವನ್ನು ಲೂಟಿ ಮಾಡಿ ಮೆರೆಯುತ್ತಿದ್ದಾರೆ. ಅದೇ ಹಣವನ್ನು ಮುಂದಿನ ಚುನಾವಣೆಯಲ್ಲಿ ಮತದಾರರಿಗೆ ಹಂಚುತ್ತಾರೆ ಎಂದು ಟೀಕಾಪ್ರಕಾರ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

