ಬೆಂಗಳೂರು: ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಸಮಸ್ಯೆ ಪರಿಹರಿಸಿ ಕೊಳ್ಳದಿದ್ದರೆ ಮುಂದಿನ ದಿನದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. ಈಗಲೇ ನಾವು ಸಮಸ್ಯೆ ಪರಿಹರಿಸಿಕೊಳ್ಳದಿದ್ದರೆ ಮುಂದೆ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ. ಬೆಂಗಳೂರಿನಲ್ಲಿ ಈಗಾಗಲೇ ನೀರಿಗಾಗಿ ಸಾಕಷ್ಟು ಕಷ್ಟ ಇದೆ. ಟ್ಯಾಂಕರ್ ನೀರನ್ನು ತರಿಸಲಾಗುತ್ತಿದೆ. ಮುಂದಿನ ದಿನದಲ್ಲಿ ಇನ್ನೂ ಕಷ್ಟಕರವಾಗಿರಲಿದೆ. ಈ ಸಮಸ್ಯೆಗಳನ್ನು ಪರಿಹಾರ ಮಾಡಬೇಕು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

