ನವದೆಹಲಿ:ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಎನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಅಮಿತ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಐಇ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳಿಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ ಇವೆಲ್ಲವುಗಳ ತೀರ್ಮಾನಗಳೆಲ್ಲವನ್ನೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು. ಬರುವ ಎರಡು ಮೂರು ದಿನಗಳ ರಾಜಕೀಯ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ತಿಳಿಸುವುದಾಗಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

