ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. ಇವತ್ತಿನ ದಿನಕ್ಕೆ ಚುನಾವಣೆ ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ. ಮೋದಿ ನಾಯಕತ್ವದಲ್ಲಿ ಚುನಾವಣೆಯನ್ನು ಗೆಲ್ಲುವುದು ಅಸಾಧ್ಯ. ಇನ್ನು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

