ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಹೊರಬರಲಾಗದೇ ಒದ್ದಾಡಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ದೊಡ್ಡಸೋಮಣ್ಣರ ಜಯ್ಯಪ್ಪ(45) ಸಾವನ್ನಪ್ಪಿದ ವ್ಯಕ್ತಿ. ಮೇವು ಕಟಾವ್ ಮಾಡಿ ತರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊನೆಗೆ ಗ್ರಾಮಸ್ಥರು ಜೆಸಿಬಿಯಿಂದ ಟ್ರ್ಯಾಕ್ಟರ್ ಮೇಲೆತ್ತಿ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

